ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

Update: 2022-08-19 07:08 GMT

ಕುಶಾಲನಗರ: ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರಿನಲ್ಲಿ ಹೋಗುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ತಡರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಗುರುವಾರ ಇಲ್ಲಿಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿದ್ದರು.

ಇದನ್ನು ಓದಿ : ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು; ಕಾಂಗ್ರೆಸ್ ನಿಂದ ಪ್ರತಿಭಟನೆ 

ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಬಿಜೆಪಿ ಹಾಗೂ ಸಂಘಪರಿವಾರದ 9 ಮಂದಿಗೆ ಜಾಮೀನು ನೀಡಲಾಗಿದೆ. ಗುರುವಾರ ಗುಡ್ಡೆಹೊಸೂರು ಬಳಿ ತೆರಳುತ್ತಿದ್ದ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪದಡಿ 9 ಮಂದಿಯನ್ನು ಪೊಲೀಸರು ಬಂಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News