ಆ. 21: ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ, ಬಹುಭಾಷಾ ಕವಿಗೋಷ್ಠಿ
ಮಂಗಳೂರು: ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ ರಾಜ್ಯ ಮಟ್ಟದ ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮತ್ತು ಬಹುಭಾಷಾ ಕವಿಗೋಷ್ಠಿ ಆ. 21ರಂದು ದಾವಣಗೆರೆಯಲ್ಲಿ ನಡೆಯಲಿದೆ.
ಬೆಳಗ್ಗೆ10.30ಕ್ಕೆ ದಾವಣಗೆರೆಯ ರೋಟರಿ ಬಾಲ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂತೆಬೆನ್ನೂರು ಫೈಜ್ನಾಟ್ರಾಜ್‌ರವರಿಗೆ 2020ನೇ ಸಾಲಿನ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿಯನ್ನು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಪ್ರದಾನ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭಾಗವಹಿಸಲಿದ್ದಾರೆ.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ವಿ. ಪಟೇಲ್, ವಕೀಲರಾದ ಅನೀಶ್ ಪಾಷಾ, ಮುಸ್ಲಿಮ್ ಮುಖಂಡ ದಾದಾ ಫೀರ್ ಶೇಠ್, ಜಮಾಅತೆ ಇಸ್ಲಾಮಿ ಹಿಂದ್ ದಾವಣಗೆರೆ ಅಧ್ಯಕ್ಷರಾದ ಅಯ್ಯುಬ್ ಖಾನ್ ಉಪಸ್ಥಿತಲಿರುವರು.
ಬಹುಭಾಷಾ ಕವಿಗೋಷ್ಠಿಯಲ್ಲಿ ಕವಿಗಳಾದ ಕಲೀಮ್ ಪಾಷಾ ಜೆ., ಡಾ. ಹಸೀನಾ ಖಾದ್ರಿ, ಡಾ. ದಾವೂದ್ ಮುಹ್ಸಿನ್, ಗೋವರ್ಧನ ಗಿರಿಶಾಂ, ಗೌಸ್ ಫೀರ್ ಹಮ್ದರ್ದ್, ಸಿರಾಜ್ ರೆಹಮಾನಿ, ಶಾರದ ಕಂಪಾಲಿ, ಸನಾವುಲ್ಲಾ ನವಿಲೇಹಾಳ್ ಭಾಗವಹಿಸಲಿದ್ದಾರೆ.
ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು ಹೆಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಅಲಿ ಕಾರ್ಯಕ್ರಮ ನಿರ್ವಹಿಸಲಿದ್ದಾರೆ ಎಂದು ಮುಸ್ಲಿಮ್ ಲೇಖಕರ ಸಂಘದ ಪ್ರಕಟಣೆ ತಿಳಿಸಿದೆ.