×
Ad

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಐವರು ಆರೋಪಿಗಳು ಎನ್​ಐಎ ವಶಕ್ಕೆ

Update: 2022-08-19 16:46 IST
ಪ್ರವೀಣ್ ನೆಟ್ಟಾರು

ಸುಳ್ಯ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ತಮ್ಮ ಕಸ್ಟಡಿಗೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಆರೋಪಿಗಳಾದ ನೌಫಲ್ (28), ಝೈನುಲ್ ಆಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಮತ್ತು ರಿಯಾಝ್ (27) ಅವರನ್ನು ಎನ್‌ಐಎ ಆರು ದಿನಗಳ ಕಾಲ (ಆ.23ರ ವರೆಗೆ) ವಶಕ್ಕೆ ಪಡೆದುಕೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.‌

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಅವರನ್ನು ರಸ್ತೆಯಲ್ಲಿ ಆರೋಪಿಗಳು ಹತ್ಯೆ ಮಾಡಿದ್ದರು. ಕಾನೂನುಬಾಹಿರ ಚಟುವಟಿಕೆಗಳ ತಡೆ (ಯುಎಪಿಎ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳ್ಳಾರೆ ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು, ಗುರುವಾರ ಐವರು ಆರೋಪಿಗಳನ್ನು ಆರು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಐವರು ಆರೋಪಿಗಳು ಮಂಗಳೂರು ಜೈಲಿನಲ್ಲಿದ್ದು, ಅಲ್ಲಿಂದಲೇ ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಿದ್ದಾರೆ ಎಂದು hindustantimes.com ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News