×
Ad

ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಕ್ರೀಡಾಪಟುಗಳ ಆಯ್ಕೆ ಶಿಬಿರ

Update: 2022-08-19 19:43 IST

ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಬೆಂಗಳೂರಿನ ವಿದ್ಯಾನಗರದಲ್ಲಿರುವ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ತರಬೇತಿ ಕೇಂದ್ರಕ್ಕೆ 14 ವರ್ಷ ಮೇಲ್ಪಟ್ಟ 23 ವರ್ಷದೊಳಗಿನ ಅಥ್ಲೆಟಿಕ್ಸ್, ಶೂಟಿಂಗ್ ಹಾಗೂ ಈಜು ಕ್ರೀಡೆಗಳಲ್ಲಿನ ಪ್ರತಿಭಾನ್ವಿತ ಕ್ರೀಡಾ ಪಟುಗಳನ್ನು ಆಯ್ಕೆ ಮಾಡುವ ಸಲುವಾಗಿ ಬೆಂಗಳೂರಿನ ಕ್ರೀಡಾಶಾಲೆಯಾದ ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ತರಬೇತಿ ಕೇಂದ್ರದಲ್ಲಿ ಆಗಸ್ಟ್ 23 ಮತ್ತು 24ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820- 2521324, 9480886467ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News