ಟ್ರ್ಯಾಕ್ಟರ್- ಲಾರಿ ಢಿಕ್ಕಿ: 6 ಮಂದಿ ಸಾವು, 20 ಮಂದಿಗೆ ಗಾಯ

Update: 2022-08-20 02:39 GMT
Photo: Twitter/@ANI

ಜೈಪುರ: ರಾಜಸ್ಥಾನ(Rajasthan)ದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ಅಪಘಾತ(Accident )ದಲ್ಲಿ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಢಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರ 20 ಮಂದಿ ಗಾಯಗೊಂಡಿದ್ದಾರೆ.

"ಸುಮೇರುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಗಾಯಾಳುಗಳಿಗೆ ಸುಮೇರುಪುರ, ಪಾಲಿ ಮತ್ತು ಶಿವಗ್ನಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಾಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜೈಸಲ್ಮೇರ್ ನ ರಾಮದೇವ್ರದಲ್ಲಿರುವ ಬಾಮಾ ರಾಮದೇವ್ ದೇಗುಲಕ್ಕೆ ಭೇಟಿ ನೀಡಿದ ಬಳಿಕ ತೀರ್ಥಯಾತ್ರಿಗಳು ಟ್ರ್ಯಾಕ್ಟರ್ ನಲ್ಲಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.

ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಈ ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಉಪರಾಷ್ಟ್ರಪತಿಗಳು, ಗಾಯಾಳುಗಳ ಕ್ಷಿಪ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಭಾರತದ ದೇಶಿ ಕಲಾಕೃತಿಗಳನ್ನು ಮರಳಿಸಿದ ಬ್ರಿಟನ್ ಮ್ಯೂಸಿಯಂ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News