ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ: ರಂಭಾಪುರಿಶ್ರೀ
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶುಕ್ರವಾರ ಚಿಕ್ಕಮಗಳೂರು ಜಿಲ್ಲಾ ಪ್ರವಾಸದ ವೇಳೆ ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರು ಮಠದ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, 'ಧರ್ಮ ಒಡೆಯುವುದು ನನ್ನ ಉದ್ದೇಶವಾಗಿರಲಿಲ್ಲ. ಕೆಲವರು ನನ್ನನ್ನು ದಾರಿ ತಪ್ಪಿಸಿದರು. ಇನ್ಯಾವತ್ತು ಧರ್ಮದ ವಿಷಯಕ್ಕೆ ಹೋಗುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪಶ್ವಾತ್ತಾಪ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ಜನರ ಶ್ರೇಯೋಭಿವೃದ್ಧಿಗೆ ಆಧ್ಯತೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು' ಎಂದು ತಿಳಸಿದರು.
ಇದನ್ನೂ ಓದಿ: ಮಂಗಳೂರು: ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನೀರುಪಾಲು
ಇದೇ ವೇಳೆ ಸ್ವಾಮೀಜಿ ಅವರು ಸಿದ್ದರಾಮಯ್ಯ ಅವರ ಕೊರಳಿಗೆ ರುದ್ರಾಕ್ಷಿ ಹೊಂದಿರುವ ಹಾರವೊಂದನ್ನು ಹಾಕಿ ಅದನ್ನು ಚುನವಾವಣೆ ಮುಗಿಯುವವರೆಗೂ ತೆಗೆಯಬೇಡಿ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.