ರಂಭಾಪುರಿ ಶ್ರೀ ಬಳಿ ನೋವು ತೋಡಿಕೊಂಡಿಲ್ಲ, ಆಗಿದ್ದು ಹೇಳಿದ್ದೇನೆ ಅಷ್ಟೇ: ಸಿದ್ದರಾಮಯ್ಯ ಸ್ಪಷ್ಟನೆ
ಹಾಸನ: 'ನಾನು ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ, ನಾವು ಲಿಂಗಾಯಿತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೀನಿ ಅಷ್ಟೇ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಧರ್ಮ ಯುದ್ಧದ ಬಗ್ಗೆ ನಾನೇನು ತಲೆ ಕೆಡಿಸಿಕೊಂಡಿರಲಿಲ್ಲ, ನನಗೆ ಶಾಮನೂರು ಶಿವಶಂಕರಪ್ಪ ಅವರು ಒಂದು ಅರ್ಜಿ ಕೊಟ್ಟು ವೀರ ಶೈವ ಧರ್ಮ ಮಾಡಿ ಎಂದು ಹೇಳಿದರು. ಅಲ್ಲಿಂದ ಇದೆಲ್ಲ ಶರುವಾಯಿತು ಎಂದು ಶ್ರೀಗಳ ಬಳಿ ಹೇಳಿದೆ ಅಷ್ಟೇ' ಎಂದು ತಿಳಿಸಿದರು.
ವಾರ್ತಾಭಾರತಿಯ ನ್ಯೂಸ್ ಅಪ್ಡೇಟ್ಸ್ ನಿಮ್ಮ ವಾಟ್ಸ್ ಆಪ್ ಗೆ ತಲುಪಬೇಕೇ ? ಈ ಲಿಂಕ್ https://bit.ly/3Cd3adz ಕ್ಲಿಕ್ ಮಾಡಿ ನಮ್ಮ ಗ್ರೂಪ್ Join ಆಗಿ.
ಶುಕ್ರವಾರ ಚಿಕ್ಕಮಗಳೂರು ಜಿಲ್ಲಾ ಪ್ರವಾಸದ ವೇಳೆ ಬಾಳೆಹೊನ್ನೂರಿನ ರಂಭಾಪುರಿ ಮಠದಲ್ಲಿ ಸ್ವಾಮೀಜಿಯನ್ನು ಭೇಟಿ ಮಾಡಿದ್ದರು.
ಸಿದ್ದರಾಮಯ್ಯ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಸ್ವಾಮೀಜಿ, 'ಧರ್ಮ ಒಡೆಯುವುದು ನನ್ನ ಉದ್ದೇಶವಾಗಿರಲಿಲ್ಲ. ಕೆಲವರು ನನ್ನನ್ನು ದಾರಿ ತಪ್ಪಿಸಿದರು. ಇನ್ಯಾವತ್ತು ಧರ್ಮದ ವಿಷಯಕ್ಕೆ ಹೋಗುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪಶ್ವಾತ್ತಾಪ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ಜನರ ಶ್ರೇಯೋಭಿವೃದ್ಧಿಗೆ ಆಧ್ಯತೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು' ಎಂದು ತಿಳಿಸಿದ್ದರು.
ಇದನ್ನೂ ಓದಿ: ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ: ರಂಭಾಪುರಿಶ್ರೀ