ಇಂಗ್ಲೆಂಡ್ ವಿರುದ್ಧ ಸರಣಿಯ ಬಳಿಕ ಜೂಲನ್ ಗೋಸ್ವಾಮಿ ಕ್ರಿಕೆಟ್ ನಿಂದ ನಿವೃತ್ತಿ

Update: 2022-08-20 07:59 GMT
Photo:BCCI

ಹೊಸದಿಲ್ಲಿ: ಭಾರತದ ಮಹಿಳಾ ಕ್ರಿಕೆಟ್ ತಂಡದ ಹಿರಿಯ ವೇಗದ ಬೌಲರ್ ಜೂಲನ್ ಗೋಸ್ವಾಮಿ ಸೆಪ್ಟೆಂಬರ್ 24 ರಂದು ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ  ಅಂತಿಮ ಏಕದಿನ ಪಂದ್ಯದ ನಂತರ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ ಎಂದು ಮೂಲಗಳು NDTV ಗೆ ತಿಳಿಸಿವೆ.

ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಪ್ರಕಟಿಸಲಾಗಿರುವ ತಂಡದಲ್ಲಿ ಶುಕ್ರವಾರ ಜೂಲನ್ ಸ್ಥಾನ ಪಡೆದಿದ್ದಾರೆ. ಜೂಲನ್ 2022 ರ ಏಕದಿನ ವಿಶ್ವಕಪ್ ನಂತರ ವಿಶ್ರಾಂತಿ ಪಡೆದಿದ್ದಾರೆ ಹಾಗೂ  ಅವರು ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಆಡಿರಲಿಲ್ಲ.

ಮಹಿಳಾ ಕ್ರಿಕೆಟ್‌ನಲ್ಲಿ ಎಲ್ಲಾ ಸ್ವರೂಪದ ಪಂದ್ಯಗಳಲ್ಲಿ ಅತ್ಯಂತ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿಯಾಗಿರುವ  ಜೂಲನ್ ತನ್ನ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ. ಅವರು ಪ್ರಸ್ತುತ ಎಲ್ಲಾ ಮೂರು ಸ್ವರೂಪದ ಕ್ರಿಕೆಟ್ ನಲ್ಲಿ ಒಟ್ಟು 352 ವಿಕೆಟ್‌ಗಳನ್ನು ಹೊಂದಿದ್ದಾರೆ.

ಈ ವರ್ಷದ ಆರಂಭದಲ್ಲಿ ಜೂಲನ್ ಅವರ ದೀರ್ಘಕಾಲದ ಸಹ ಆಟಗಾರ್ತಿ ಮಿಥಾಲಿ ರಾಜ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಭಾರತ ಮಹಿಳಾ ಟಿ20 ಹಾಗೂ  ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿದೆ. 

ಸೆ.10ರಿಂದ 3 ಪಂದ್ಯಗಳ ಟ್ವೆಂಟಿ-20 ಸರಣಿ ಆರಂಭವಾಗಲಿದ್ದು, ಏಕದಿನ ಸರಣಿಯು ಸೆ.18ರಿಂದ ಆರಂಭವಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News