×
Ad

ಸಾಹಿತಿ ಉದಯ ಧರ್ಮಸ್ಥಳ ನಿಧನ

Update: 2022-08-20 13:49 IST

ಬೆಳ್ತಂಗಡಿ, ಆ.20: ಹಿರಿಯ ಸಾಹಿತಿ ಉದಯ ಧರ್ಮಸ್ಥಳ(64) ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಮೂಲತಃ ಧರ್ಮಸ್ಥಳದವರಾದ ಉದಯ ಅವರು ಬೆಂಗಳೂರಿನ ಮಾರತಹಳ್ಳಿಯಲ್ಲಿ ನೆಲೆಸಿದ್ದರು. ತುಳು ಸಾಹಿತ್ಯ ಅಕಾಡಮಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು, ತುಳುವನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದ ಹೋರಾಟದಲ್ಲಿ ಸಕ್ರಿಯರಾಗಿದ್ದರು

ಸನಾತನ ಸಾರಥಿ ಪತ್ರಿಕೆಯ ಸಂಪಾದಕರಾಗಿದ್ದ ಅವರು ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ ಸಾಹಿತ್ಯ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News