×
Ad

ಅಂಜುಮನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉನ್ನತೀಕರಿಸಿದ ಸುಸಜ್ಜಿತ ಲ್ಯಾಬ್ ಲೋಕಾರ್ಪಣೆ

Update: 2022-08-20 18:00 IST

ಭಟ್ಕಳ; ಅಂಜುಮನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‍ಮೆಂಟ್‍ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದ ಉನ್ನತೀಕರಿಸಿದ ಕಂಪ್ಯೂಟರ್ ಲ್ಯಾಬ್ ಶನಿವಾರ ಎಐಟಿಎಂ ಆಡಳಿತ ಮಂಡಳಿ ಸದಸ್ಯ ಅರ್ಷದ್ ಹಸನ್ ಕಾಡ್ಲಿ ಉದ್ಘಾಟಿಸಿದರು. 

ನಂತರ ಮಾತನಾಡಿದ ಅವರು, ಸಂಸ್ಥೆಯ ಕಲಿಕಾ ಸೌಲಭ್ಯಗಳಿಗೆ ನೆರವಾಗಲು ಪ್ರಯೋಗಾಲಯಗಳನ್ನು ಮೇಲ್ದರ್ಜೆಗೇರಿಸುವ ಮಹತ್ವವನ್ನು ತಿಳಿಸಿದರು. ಹೆಚ್ಚಿನ ಜನರು ಮುಂದೆ ಬಂದು ಎಲ್ಲಾ ಪ್ರಯೋಗಾಲಯಗಳ ಉನ್ನತೀಕರಣಕ್ಕೆ ಸಹಾಯ ಮಾಡಬೇಕೆಂದು ಅವರು ಒತ್ತಾಯಿಸಿದರು.

ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಆಸ್ಟ್ರೇಲಿಯದ ವೂಲ್‍ಪರ್ಟ್ ಗ್ರೂಪ್ ನ  ನಿರ್ದೇಶಕ  ಪ್ರೊ. ಜಾಫರ್ ಸಾಧಿಕ್ ಮೊಹಮ್ಮದ್ ಗೌಸ್ ಆನ್ಲೈನ್ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜಿಯೋಸ್ಪೇಷಿಯಲ್ ಭವಿಷ್ಯದ ತಂತ್ರಜ್ಞಾನಗಳಲ್ಲಿ ಒಂದಾಗಿದೆ, ಇದು ಜಾಗತಿಕವಾಗಿ ವ್ಯಾಪಕವಾಗಿ ಬಳಸಲಾಗುವ ತಂತ್ರಜ್ಞಾನಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿದೆ ಎಂದ ಅವರು, ಜಿಯೋಸ್ಪೇಷಿಯಲ್ ತಂತ್ರಜ್ಞಾನ ಮತ್ತು ಅದರ ಅನ್ವಯಗಳ ಕುರಿತು ವಿದ್ಯಾರ್ಥಿಗಳು ಹೆಚ್ಚೆಚ್ಚು ತಿಳಿದುಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಮುಹಮ್ಮದ್ ಸಾದಿಕ್ ಪಿಲ್ಲೂರ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಇಸ್ಹಾಕ್ ಶಾಬಂದ್ರಿ, ಎಐಟಿಎಂ ಕಾರ್ಯದರ್ಶಿ ಮೊಹಿದ್ದೀನ್ ರುಕ್ನದ್ದೀನ್, ಪ್ರಾಂಶುಪಾಲ ಡಾ.ಕೆ.ಫಝಲುರ್ ರಹ್ಮಾನ್, ರಿಜಿಸ್ಟ್ರಾರ್ ಪ್ರೊ.ಝಾಹಿದ್ ಖರೂರಿ ಉಪಸ್ಥಿತರಿದ್ದರು. 

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥ ಡಾ.ಟಿ.ಎಂ.ಪಿ.ರಾಜ್ ಕುಮಾರ್ ಸ್ವಾಗತಿಸಿದರು. ಪ್ರೊ.ಶ್ರೀಶೈಲ್ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News