×
Ad

''ಮೊಟ್ಟೆ ಎಸೆದವನು ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ರಾತ್ರೋರಾತ್ರಿ ಪೊಲೀಸ್ ಠಾಣೆಯಿಂದ ಬಿಡಿಸಿದ್ದೇಕೆ?''

Update: 2022-08-20 18:03 IST

ಬೆಂಗಳೂರು: 'ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ (BJP) ಶಾಸಕ ಅಪ್ಪಚ್ಚು ರಂಜನ್ ರಾತ್ರೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು,  'ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ 'ಆಪರೇಷನ್ ಕಮಲ' ಕೂಡಾ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ' ಎಂದು ಕಿಡಿಕಾರಿದ್ದಾರೆ. 

''ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ?'' ಎಂದು ಬಿಜೆಪಿ ಅನ್ನು ಪ್ರಶ್ನೆ ಮಾಡಿದ್ದಾರೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News