×
Ad

RSS 'ಪ್ಯಾಂಟು' ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?: ಕಾಂಗ್ರೆಸ್‌ ಪ್ರಶ್ನೆ

Update: 2022-08-20 18:45 IST

ಮಡಿಕೇರಿ, ಆ.20: ಸಿದ್ದರಾಮಯ್ಯ ಕಾರಿಗೆ ಕೊಡಗಿನ ಗುಡ್ಡೆಹೊಸೂರಿಲ್ಲಿ ಮೊಟ್ಟೆ ಎಸೆದ ಆರೋಪಿ ಸಂಪತ್ ಬಿಜೆಪಿ ಕಾರ್ಯಕರ್ತನೇ ಅಲ್ಲ, ಆತ ಕಾಂಗ್ರೆಸ್ ಕಾರ್ಯಕರ್ತ ಎಂದು, ಆರೋಪಿ ಕಾಂಗ್ರೆಸ್ ಶಾಲು ಧರಿಸಿರುವ ಫೋಟೋವನ್ನು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು. 

ಇದೀಗ ಆರೋಪಿ ಸಂಪತ್, ಆರೆಸ್ಸೆಸ್ ಸಮವಸ್ತ್ರದಲ್ಲಿ ಕಾರ್ಯಕರ್ತರ ಜೊತೆಗಿನ ಹಲವು ಫೋಟೋಗಳು ವೈರಲ್ ಆಗುತ್ತಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್,  ಆರೋಪಿ ಆರೆಸ್ಸೆಸ್ ಸಮವಸ್ತ್ರದಲ್ಲಿರುವ ಹಲವು ಫೋಟೊಗಳನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ. 

 ''ಬಿಜೆಪಿ & RSS ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ, ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. RSS 'ಪ್ಯಾಂಟು' ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?'' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯೊಂದಿಗೆ BJP ಶಾಸಕ: ಫೋಟೊ ವೈರಲ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News