×
Ad

ಬೆಂಗಳೂರು | ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮೂವರ ಬಂಧನ

Update: 2022-08-20 19:35 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.20: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಹೀನಕೃತ್ಯ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದಾಗ ಬೆಳಕಿಗೆ ಬಂದಿದೆ.

ಮೂರು ವರ್ಷಗಳ ಹಿಂದೆ ಮಂಡ್ಯ ಮೂಲದ ಯುವತಿಯನ್ನು ಉದ್ಯೋಗ ಕೊಡಿಸುವುದಾಗಿ ನಂಬಿಸಿ ಪ್ರಿಯಕರನೇ ನಗರಕ್ಕೆ ಕರೆತಂದಿದ್ದ. ಬಳಿಕ ಆಕೆಗೆ ಯಾವುದೇ ಉದ್ಯೋಗ ಕೊಡಿಸದೆ, ವೇಶ್ಯಾವಾಟಿಕೆ ಜಾಲಕ್ಕೆ ನೂಕಿದ ಹೀನ ಕೃತ್ಯ ಇದಾಗಿದೆ.

ಪ್ರಿಯಕರ ಮಾತ್ರವಲ್ಲದೇ ಆಕೆಯ ಮೇಲೆ ಹಲವರು ಏಕಕಾಲಕ್ಕೆ ದೌರ್ಜನ್ಯ ಎಸಗಿರುವುದಾಗಿ ಸಂತ್ರಸ್ತ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ವೇಶ್ಯಾವಾಟಿಕೆಗೆ ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲಕ ಸಂತೋಷ್ ಕೂಡಾ ಬೆಂಬಲ ನೀಡುತ್ತಿದ್ದು, ಆತ ದಂಧೆಗೆ ಗ್ರಾಹಕರನ್ನು ಹೊಟೇಲ್‍ಗೆ ಕಳುಹಿಸುತ್ತಿದ್ದ ಎಂದು ತಿಳಿದುಬಂದಿದೆ.

ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧ ಮಂಜುಳಾ, ಬ್ರಹ್ಮೇಂದ್ರ ಹಾಗೂ ಲಾಡ್ಜ್ ಮಾಲಕ ಸಂತೋಷ್‍ನನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News