×
Ad

ಮಡಿಕೇರಿ | ಧರ್ಮಗುರುವಿನ ಮೇಲೆ ಹಲ್ಲೆ ಆರೋಪ: ಎಸ್‍ಪಿಗೆ ದೂರು

Update: 2022-08-20 19:50 IST

ಮಡಿಕೇರಿ ಆ.20 : ಕಾಕೋಟುಪರಂಬು ಸಮೀಪ ಧರ್ಮಗುರು ಹಾರಿಸ್ ಮುಸ್ಲಿಯಾರ್ ಎಂಬುವವರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸುನ್ನಿ ಯುವಜನ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದೆ.

 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹಾರಿಸ್ ಮುಸ್ಲಿಯಾರ್ ಅವರ ಮೇಲೆ ಕಿಡಿಗೇಡಿಗಳು ವಿನಾಕಾರಣ ಹಲ್ಲೆ ನಡೆಸಿರುವುದಲ್ಲದೆ ಜೊತೆಯಲ್ಲಿದ್ದ ಪತ್ನಿ ಹಾಗೂ ಮಕ್ಕಳ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಶಾಂತಿ, ಸೌಹಾರ್ದತೆ ನೆಲೆಸಿರುವ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಕೆಲವರು ಯತ್ನಿಸುತ್ತಿದ್ದು, ಸೂಕ್ತ ತನಿಖೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.

ಎಲ್ಲಾ ಜನಾಂಗದವರು ಒಗ್ಗಟ್ಟಿನಿಂದ ಜೀವನ ಸಾಗಿಸುತ್ತಿರುವ ಪ್ರಜ್ಞಾವಂತರ ಜಿಲ್ಲೆ ಕೊಡಗಿನ ಗೌರವಕ್ಕೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ. ಧರ್ಮಗುರುಗಳ ಮೇಲೆ ಹಲ್ಲೆ ನಡೆಸಿ ಭೀತಿಯ ವಾತಾವರಣ ಸೃಷ್ಟಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಇನ್ನು ಮುಂದೆ ಈ ರೀತಿಯ ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರಮುಖರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಮನವಿ ಮಾಡಿದರು.

ಎಸ್‍ವೈಎಸ್ ಜಿಲ್ಲಾಧ್ಯಕ್ಷ ಬಶೀರ್ ಹಾಜಿ, ಉಪಾಧ್ಯಕ್ಷರುಗಳಾದ ಕೆ.ಎ.ಯಾಕುಬ್ ಬಜೆಗುಂಡಿ, ಎಂ.ಎಂ.ರಫೀಕ್ ಸುಂಟಿಕೊಪ್ಪ, ಪ್ರಧಾನ ಕಾರ್ಯದರ್ಶಿ ಎಂ.ವೈ, ಅಶ್ರಫ್ ಫೈಝಿ, ಸಂಘಟನಾ ಕಾರ್ಯದರ್ಶಿ ಕೆ.ಎ.ಅಬೂಬಕರ್ ದಾರಿಮಿ, ಎಸ್.ಎಂ.ಮುಹಮ್ಮದ್ ಹಾಗೂ ಜಿಲ್ಲಾ ಕೋಶಾಧಿಕಾರಿ ವೈ.ಎಂ.ಉಮ್ಮರ್ ಫೈಝಿ ದೂರು ನೀಡುವ ಸಂದರ್ಭ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News