×
Ad

​ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2022-08-20 21:28 IST

ಅಮಾಸೆಬೈಲು : ಅನಾರೋಗ್ಯದಿಂದ ಬಳಲುತ್ತಿದ್ದ ಮಡಾಮಕ್ಕಿ ಗ್ರಾಮದ ಕಬ್ಬಿನಾಲೆ ನಿವಾಸಿ ಸುಮತಿ(42) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಆ.19ರಂದು ಬೆಳಗ್ಗೆ ಮನೆಯ ಹತ್ತಿರದ ಹಟ್ಟಿಯಲ್ಲಿ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಮದ್ಯಪಾನಕ್ಕೆ ಹಣದ ಅಡಚಣೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಕೆಂಚನೂರು ಗ್ರಾಮದ ಹಕ್ಲಮನೆ ನಿವಾಸಿ  ಮೋಹನ ಶೆಟ್ಟಿ (52) ಎಂಬವರು ಆ.19ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News