×
Ad

ದಸರಾ ಕ್ರೀಡಾಕೂಟ: ಪರಿಷ್ಕೃತ ಕಾರ್ಯಕ್ರಮ

Update: 2022-08-20 21:44 IST
ಸಾಂದರ್ಭಿಕ ಚಿತ್ರ

ಉಡುಪಿ, ಆ.20: ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ ೩ರಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ, ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿವೆ.

ಸ್ಪರ್ಧೆಗಳ ವಿವರ: ಪುರುಷರಿಗೆ: ೧೦೦ಮೀ, ೨೦೦ಮೀ, ೪೦೦ಮೀ, ೮೦೦ಮೀ, ೧೫೦೦ಮೀ, ೫೦೦೦ಮೀ. ಓಟ, ಉದ್ದ ಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, ೧೧೦ಮೀ ಹರ್ಡಲ್ಸ್, ೧೦೦ಮೀ ರಿಲೇ, ೪೦೦ಮೀ ರಿಲೇ ಹಾಗೂ ಗುಂಪು ಕ್ರೀಡೆಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್, ಥ್ರೋಬಾಲ್.

ಮಹಿಳೆಯರಿಗೆ: ೧೦೦ಮೀ, ೨೦೦ಮೀ, ೪೦೦ಮೀ, ೮೦೦ಮೀ, ೧೫೦೦ಮೀ, ೩೦೦೦ಮೀ ಓಟ, ಉದ್ದಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, ೧೦೦ಮೀ ಹರ್ಡಲ್ಸ್, ೧೦೦ಮೀ. ರಿಲೇ, ೪೦೦ಮೀ. ರಿಲೇ, ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಪಂದ್ಯಾಟ ನಡೆಯಲಿವೆ.

ಕ್ರೀಡಾಪಟುಗಳು ತಮಗೆ ಸಂಬಂಧಪಟ್ಟ ತಾಲೂಕುಗಳಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ  ಭಾಗವಹಿಸಬಹುದು. ಆಧಾರ್ ಕಾರ್ಡ್ ಪ್ರತಿಯನ್ನು ತಪ್ಪದೇ ಹಾಜರುಪಡಿಸಬೇಕು. ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿವೆ.  

ಕ್ರೀಡಾಪಟುಗಳು ಹೆಸರು ಹಾಗೂ ತಂಡಗಳನ್ನು ನೊಂದಾಯಿಸಲು ಆಗಸ್ಟ್ ೩೦ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: ೦೮೨೦-೨೫೨೧೩೨೪, ಮೊ.ನಂ.೯೪೮೦೮೮೬೪೬೭ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News