×
Ad

ಶಿವಮೊಗ್ಗ | ಮಾಲ್ ನಲ್ಲಿ ಸಾವರ್ಕರ್ ಭಾವಚಿತ್ರ ತೆಗೆಸಿದ ಪ್ರಕರಣ: ಆರೋಪಿಗೆ ಜಾಮೀನು

Update: 2022-08-20 22:56 IST
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ನಗರದ ಸಿಟಿ ಸೆಂಟರ್ ಮಾಲ್ ನಲ್ಲಿ ಸಾವರ್ಕರ್ ಚಿತ್ರ ಹಾಕಿದ್ದನ್ನು ವಿರೋಧಿಸಿದ ಪ್ರಕರಣದಲ್ಲಿ ಬಂಧಿತ ಎಂ.ಡಿ. ಶರೀಫ್ ಗೆ ಶನಿವಾರ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ಇತ್ತೀಚೆಗೆ ಶಿವಪ್ಪ ನಾಯಕ ಸಿಟಿ ಸೆಂಟರ್ ಮಾಲ್ ನಲ್ಲಿ ಸಾವರ್ಕರ್ ಭಾವಚಿತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಭಾವಚಿತ್ರವನ್ನು ತೆಗೆಸಿದ ಎಂ.ಡಿ ಶರೀಫ್ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪಾಲಿಕೆ ಆಯುಕ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News