ರಾಜ್ಯದಲ್ಲಿ ಶನಿವಾರ 1,713 ಮಂದಿಗೆ ಕೊರೋನ ದೃಢ: 4 ಮಂದಿ ಮೃತ್ಯು

Update: 2022-08-20 17:50 GMT

ಬೆಂಗಳೂರು, ಆ.20: ರಾಜ್ಯದಲ್ಲಿ ಶನಿವಾರ 1,713 ಹೊಸ ಕೊರೋನ (Coronavirus) ಪ್ರಕರಣಗಳು ದೃಢವಾಗಿವೆ. ನಾಲ್ಕು ಜನರು ಮೃತಪಟ್ಟಿದ್ದು, 1,034 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,40,111ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,166ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 10,452ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ನಾಲ್ಕು ಜನರು ಮೃತಪಟ್ಟಿದ್ದು, ಧಾರವಾಡದಲ್ಲಿ ಇಬ್ನರು, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ 965 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 549 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸೋಂಕಿತರು ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News