×
Ad

ಅಸ್ಸಾಂ: ಪ್ರಮುಖ ನೇಮಕಾತಿ ಪರೀಕ್ಷೆಯಲ್ಲಿ ನಕಲು ತಡೆಯಲು 4 ಗಂಟೆ ಇಂಟರ್ನೆಟ್ ಸ್ಥಗಿತ

Update: 2022-08-21 13:00 IST
Photo:PTI

ದಿಸ್ಪುರ್: ವಿವಿಧ ಇಲಾಖೆಗಳಲ್ಲಿನ 27,000 ಸರಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳು ಅಸ್ಸಾಂನಲ್ಲಿ ಪ್ರಮುಖ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಸಿದ್ಧರಾಗಿರುವ ಕಾರಣ ಅಭ್ಯರ್ಥಿಗಳು ನಕಲು ಮಾಡುವುದನ್ನು ತಡೆಯಲು ರಾಜ್ಯ ಸರಕಾರವು ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ(Internet Shutdown )

ಪರೀಕ್ಷೆಯು ರಾಜ್ಯದ ಅತಿದೊಡ್ಡ ನೇಮಕಾತಿ ಅಭಿಯಾನದ ಭಾಗವಾಗಿದೆ, ಇದಕ್ಕಾಗಿ ಸುಮಾರು 14 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಾರೆ.

ಪರೀಕ್ಷೆ ನಡೆಯುವ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳು ಲಭ್ಯವಿರುವುದಿಲ್ಲ ಎಂದು ಸರಕಾರ ತಿಳಿಸಿದೆ.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿರುವುದರಿಂದ ಸಿಆರ್‌ಪಿಸಿಯ ಸೆಕ್ಷನ್ 144 ವಿಧಿಸಲಾಗುವುದು ಎಂದು ಸರಕಾರ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News