ಶಾಂತಿ ಕಾಪಾಡುವುದು ರಾಜಕೀಯ ಪಕ್ಷಗಳ ಕರ್ತವ್ಯ: ಸಿಎಂ ಬಸವರಾಜ ಬೊಮ್ಮಾಯಿ

Update: 2022-08-21 12:50 GMT
photo credit- @CMofKarnataka

ಹುಬ್ಬಳ್ಳಿ, ಆ. 21: ‘ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್ ಬಗ್ಗೆಯೂ ಪರ-ವಿರೋಧ ನಂಬಿಕೆ ಮತ್ತು ವಾದಗಳಿವೆ. ಇವು ಐತಿಹಾಸಿಕ ವಿಚಾರಗಳಾಗಿದ್ದು, ಪರ-ವಿರೋಧ ವಾದಗಳಿರುತ್ತವೆ. ಯಾವುದೇ ವಿಚಾರದ ಬಗ್ಗೆ ವೈಚಾರಿಕತೆ ಇದ್ದರೆ, ವೈಚಾರಿಕ ಚಿಂತನೆಯಿಂದಲೇ ಪ್ರತಿಪಾದಿಸಬೇಕು. ವೈಚಾರಿಕತೆಯಿಂದಲೇ ವಿರೋಧಿಸಬೇಕು. ಇಂತಹ ವಿಷಯಗಳನ್ನು ಬೀದಿಗೆಳೆದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸವನ್ನು ಯಾರೂ ಮಾಡಬಾರದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj S Bommai) ಅವರು ತಿಳಿಸಿದ್ದಾರೆ.

ರವಿವಾರ ಹಾವೇರಿಗೆ ತೆರಳುವ ಮುನ್ನ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ವಿರೋಧಪಕ್ಷದ ನಾಯಕ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಾವುದೇ ಘಟನೆ ನಡೆದಾಗ ಕಾನೂನುಬದ್ಧ ತನಿಖೆ ನಡೆಸಲಾಗುತ್ತದೆ. ವಿಪಕ್ಷ ನಾಯಕರಿಗೆ ರಕ್ಷಣೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಈ ಪ್ರಕರಣಕ್ಕೆ ರಾಜಕೀಯ ಲೇಪನ ಮಾಡುವುದು ಆಯಾ ರಾಜಕೀಯ ಪಕ್ಷಕ್ಕೆ ಬಿಟ್ಟಿದ್ದು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ಎಲ್ಲ ರಾಜಕೀಯ ಪಕ್ಷಗಳ ಕರ್ತವ್ಯವಾಗಿದೆ' ಎಂದು ಅವರು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News