ಶಿವಮೊಗ್ಗ | ಚೂರಿ ಇರಿತ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಶಿವಮೊಗ್ಗ, ಆ.21: ನಗರದ ಗಾಂಧಿ ಬಝಾರ್‌ನಲ್ಲಿ ಯುವಕನಿಗೆ ಚೂರಿ ಇರಿದಿದ್ದ ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಐದನೇ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ಆದೇಶಿಸಿದೆ.
ಪ್ರಕರಣದಲ್ಲಿ ಬಂಧಿತರಾದ ನದೀಮ್, ಅಬ್ದುಲ್ ರೆಹಮಾನ್, ತನ್ವೀರ್ ಅವರ ಪೊಲೀಸ್ ಕಸ್ಟಡಿ ಶನಿವಾರ ಅಂತ್ಯಗೊಂಡಿದೆ. ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಲಾಗಿದೆ.
ಇದನ್ನೂ ಓದಿ: ಸಕಲೇಶಪುರ | ಕರು ಸಾಗಿಸುತ್ತಿದ್ದ ದಲಿತ ಯುವಕನ ಮೇಲೆ ಹಲ್ಲೆ ಆರೋಪ: ಬಜರಂಗದಳದ 9 ಮಂದಿ ಕಾರ್ಯಕರ್ತರ ವಿರುದ್ಧ FIR
ಆ.15ರಂದು ಗಾಂಧಿ ಬಝಾರ್‌ನಲ್ಲಿ ಪ್ರೇಮ್‌ಸಿಂಗ್ ಎಂಬ ಯುವಕನ ಮೇಲೆ ಚೂರಿಯಿಂದ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಮುಹಮದ್ ಜಬೀ ಉಲ್ಲಾ ಕಾಲಿಗೆ ಗುಂಡು ಹಾರಿಸಿ ಪೊಲೀದರು ಬಂಧಿಸಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.