ನನ್ನ ಹಾಗೂ ಎಂ.ಬಿ.ಪಾಟೀಲ್ ನಡುವೆ ಸಂಘರ್ಷವಿಲ್ಲ: ಮಾಜಿ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

Update: 2022-08-21 14:07 GMT

ಬೆಂಗಳೂರು, ಆ. 21: ‘ಲಿಂಗಾಯತ ವೀರಶೈವ ಪ್ರತ್ಯೇಕ ಧರ್ಮದ ವಿಚಾರವಾಗಿ ನನ್ನ ಮತ್ತು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿರುವ ಎಂ.ಬಿ.ಪಾಟೀಲ್ ಮಧ್ಯೆ ಯಾವುದೇ ರೀತಿಯ ಸಂಘರ್ಷಗಳಿಲ್ಲ' ಎಂದು ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಸ್ಪಷ್ಟನೆ ನೀಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಎಂ.ಬಿ.ಪಾಟೀಲ್ ಹಾಗೂ ನನ್ನ ನಡುವೆ ಉತ್ತಮ ಸಂಬಂಧವಿದೆ. ಇಬ್ಬರು ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ನಡುವೆ ಯಾವುದೇ ಪೈಪೋಟಿ ಇಲ್ಲ. ಇಬ್ಬರು ತಮಗೆ ಪಕ್ಷದ ವರಿಷ್ಟರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇವೆ' ಎಂದರು.

ವಾರ್ತಾಭಾರತಿಯ ನ್ಯೂಸ್ ಅಪ್ಡೇಟ್ಸ್ ನಿಮ್ಮ ವಾಟ್ಸ್ ಆಪ್ ಗೆ  ತಲುಪಬೇಕೇ ? ಈ ಲಿಂಕ್ https://bit.ly/3Cd3adz ಕ್ಲಿಕ್ ಮಾಡಿ ನಮ್ಮ ಗ್ರೂಪ್ Join ಆಗಿ.

‘ವೀರಶೈವ ಲಿಂಗಾಯತ ಧರ್ಮದ ವಿಚಾರವಾಗಿ ಈ ಹಿಂದೆಯೂ ನಾನು ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೇನೆ. ಅವು ಅಖಿಲ ಭಾರತ ವೀರಶೈವ ಮಹಾಸಭಾದ ಅಭಿಪ್ರಾಯಗಳು ಆಗಿವೆ. ನಾನು ಈಗಲೂ ಅದಕ್ಕೆ ಬದ್ದನಾಗಿದ್ದೇನೆ. ನಮ್ಮ ನಡುವೆ ಒಂದು ವೇಳೆ ಭಿನ್ನಾಭಿಪ್ರಾಯಗಳಿದ್ದರೆ ಅವುಗಳನ್ನು ಚರ್ಚೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ಜಟಾಪಟಿ ಅಗತ್ಯವಿಲ್ಲ' ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News