ಸಿದ್ದರಾಮಯ್ಯರಿಂದ ಪಶ್ಚಾತ್ತಾಪದ ಮಾತು ಯಾರೂ ನಿರೀಕ್ಷಿಸುವುದಿಲ್ಲ: ಬಿ.ವೈ.ವಿಜಯೇಂದ್ರ

Update: 2022-08-21 14:40 GMT

ಬೆಂಗಳೂರು, ಆ.21: ಧರ್ಮ ರಾಜಕಾರಣಕ್ಕೆ ಕೈ ಹಾಕಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪಶ್ಚಾತ್ತಾಪ ಮಾತಿನ ನಿರೀಕ್ಷೆಯಿಲ್ಲ ಎಂದು ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ರವಿವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಕ ಬೆಲೆ ತೆತ್ತಿದ್ದಾರೆ. ಪಶ್ಚಾತ್ತಾಪದ ಮಾತು ನಿಮ್ಮಿಂದ ಯಾರೂ ನಿರೀಕ್ಷಿಸುವುದಿಲ್ಲ. ಆದರೆ, ಧರ್ಮಗುರುಗಳ ದರ್ಶನಕ್ಕೆ ತೆರಳಿ ಅಲ್ಲಿಯೂ ವಿತಂಡ ವಿವಾದ ಸೃಷ್ಟಿಸುವುದು ಎಷ್ಟು ಸರಿ ಎಂದು ಕೇಳಿದ್ದಾರೆ.

ಸಿದ್ದರಾಮಯ್ಯ ಒಂದು ಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್ ಅವರಂಥ ಸ್ವಾತಂತ್ರ್ಯ ಸೇನಾನಿಗಳನ್ನು ಅವಹೇಳನ ಮಾಡುವ ಮೂಲಕ ಮತಾಂಧರನ್ನು ಎತ್ತಿ ಕಟ್ಟುವ ನಿಮ್ಮ ರಾಜಕೀಯ ನಡೆ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಧರ್ಮರಾಜಕಾರಣದ ಬಿಸಿ ಅನುಭವಿಸಿಯೂ ಮತ್ತದೇ ಹಾದಿಯಲ್ಲಿ ಸಾಗಿರುವ ನಿಮಗಾಗಿ ಬಹುದೊಡ್ಡ ಕಂದಕ ಕಾಯುತ್ತಿದೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News