ರಾಜ್ಯಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆ.23, 24ಕ್ಕೆ ಯೆಲ್ಲೋ ಅಲರ್ಟ್

Update: 2022-08-21 14:57 GMT

ಬೆಂಗಳೂರು, ಆ.21: ರಾಜ್ಯದಲ್ಲಿ ಕೆಲವು ದಿನಗಳ ಕಾಲ ತಗ್ಗಿದ್ದ ಮುಂಗಾರು (RAIN) ಮತ್ತೆ ಆರ್ಭಟ ಮುಂದುವರಿಯುವ ಸಂಭವವಿದೆ. ಆ.22ರಂದು ರಾಜ್ಯಾದ್ಯಂತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆ.23ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. 

ಆ.24ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ. 

ಬೆಂಗಳೂರು ನಗರದ ಹಲವೆಡೆ ರವಿವಾರ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗಿದೆ. ಶಾಂತಿನಗರ, ಮೆಜೆಸ್ಟಿಕ್, ಕಾರ್ಪೊರೇಷನ್ ಸೇರಿ ಹಲವೆಡೆ ಮಳೆಯಾಗಿದೆ.

ಮಳೆಯಿಂದಾಗಿ ರಸ್ತೆ ತುಂಬೆಲ್ಲಾ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ. ಹಲವು ಕಡೆ ವಿವಿಧ ಕಾಮಗಾರಿಗಳಿಗಾಗಿ ಬಿಬಿಎಂಪಿ ರಸ್ತೆಗಳನ್ನು ಅಗೆದಿದ್ದು, ಅಲ್ಲೆಲ್ಲಾ ನೀರು ನಿಂತುಕೊಂಡಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿವೆ.   

ಇದನ್ನೂ ಓದಿ:  ಬೆಂಗಳೂರು: ಕಡಿಮೆ ಅಂಕದಿಂದಾಗಿ ಕಾನೂನು ಪದವಿಗೆ ಅವಕಾಶವಿಲ್ಲವೆಂದು ಯುವಕ ಆತ್ಮಹತ್ಯೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News