ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಭಾವಚಿತ್ರಗಳನ್ನು ಅಂಟಿಸಿದ ಕಿಡಿಗೇಡಿಗಳು
Update: 2022-08-22 09:36 IST
ವಿಜಯಪುರ, ಆ.22: ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಳೆದ ರಾತ್ರಿ ಸಾವರ್ಕರ್(Vinayak Damodar Savarkar) ಅವರ ಹತ್ತಾರು ಭಾವಚಿತ್ರಗಳನ್ನು ಕಿಡಿಗೇಡಿಗಳು ಅಂಟಿಸಿರುವುದು ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಇಲ್ಲಿನ ಜಲನಗರದಲ್ಲಿರುವ ಕಾಂಗ್ರೆಸ್ ಕಚೇರಿಯ ಬಾಗಿಲು, ಕಿಟಕಿ, ಗೋಡೆ ಮೇಲೆ ಹತ್ತಾರು ಸಾವರ್ಕರ್ ಭಾವಚಿತ್ರಗಳನ್ನು ಅಂಟಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಬಿ.ಶ್ರೀರಾಮುಲು, ಬಿ.ಶಿವಪ್ಪ ಸೇರಿ ಹಲವು ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಕೆ
ಇಂದು ಬೆಳಗ್ಗೆ ವಿಷಯ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಭಾವಚಿತ್ರಗಳನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಚಾಯಗೋಲ್, ಈ ದುಷ್ಕೃತ್ಯವವನ್ನು ಖಂಡಿಸಿ ಇಂದು ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ತಿರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ.