×
Ad

ಸಿಎಂ ಬೊಮ್ಮಾಯಿ‌ಯವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ

Update: 2022-08-22 11:17 IST

ಬೆಂಗಳೂರು, ಆ.22: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ(47) ಹೃದಯಾಘಾತದಿಂದ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಗುರುಲಿಂಗಸ್ವಾಮಿ ಇಂದು ಬೆಳಗ್ಗೆ ಜಿಮ್‌ಗೆ ಹೊಗಿ ವರ್ಕೌಟ್ ಮಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ನಾಗರಭಾವಿ ಯುನಿಟಿ ಲೈಫ್  ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರೆನ್ನಲಾಗಿದೆ.

ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ನಿವಾಸಿಯಾಗಿದ್ದ ಗುರಲಿಂಗಸ್ವಾಮಿ ಅವರು  ಬಸವರಾಜ ಬೊಮ್ಮಾಯಿ‌ ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ವಿವಿಧ ಪತ್ರಿಕೆ, ಟಿವಿ ಚಾನೆಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದರು

 ಸಂತಾಪ: ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾಗಿ ಉತ್ತಮ ಜವಾಬ್ದಾರಿ ನಿರ್ವಹಣೆ ಮಾಡುತ್ತಿದ್ದ ಗುರುಲಿಂಗಸ್ವಾಮಿ ಅವರ ಅಕಾಲಿಕ ನಿಧನದ‌ ಸುದ್ದಿ ಕೇಳಿ ಮನಸಿಗೆ ಆಘಾತವಾಯಿತು.ಅವರ ನಿಧನದ ದುಖ:ವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹಾಸನ ಶಾಸಕ ಕೆ.ಗೋಪಾಲಯ್ಯ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News