ಪತ್ರಾ ಚಾಳ್ ಭೂಹಗರಣ: ಸಂಜಯ್ ರಾವುತ್ ನ್ಯಾಯಾಂಗ ಬಂಧನ ವಿಸ್ತರಣೆ
Update: 2022-08-22 15:14 IST
ಮುಂಬೈ: ಶಿವಸೇನಾ ಸಂಸದ ಸಂಜಯ್ ರಾವುತ್ (Shiva sena MP Sanjay ravut)ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮುಂಬೈನ ವಿಶೇಷ ನ್ಯಾಯಾಲಯವು ಸೆಪ್ಟಂಬರ್ 5ರ ತನಕ ವಿಸ್ತರಿಸಿ
(Judicial custody extended)ಆದೇಶ ನೀಡಿದೆ.
ಪತ್ರಾ ಚಾಳ್ ಭೂಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾವುತ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಸ್ಟ್ 1ರಂದು ತಮ್ಮ ವಶಕ್ಕೆ ಪಡೆದು ಬಂಧಿಸಿದ್ದರು.
ಆಗಸ್ಟ್ 8ರಂದು ನ್ಯಾಯಾಲಯವು ರಾವುತ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಸೋಮವಾರ ರಾವುತ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರು ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ನೀಡಿದರು.