ಸೆ. 2ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ
Update: 2022-08-22 19:41 IST
ಮಂಗಳೂರು, ಆ.22: ಪ್ರಧಾನಿ ನರೇಂದ್ರ ಮೋದಿ(Narendra Modi) ಸೆ.2ರಂದು ಮಂಗಳೂರಿಗೆ(Mangaluru) ಆಗಮಿಸಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆ ನಡೆದಿದೆ.
ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ದಲ್ಲಿ ನೂತನ ಬರ್ತ್ ಉದ್ಘಾಟನೆ ಸಹಿತ 1,250 ಕೋ.ರೂ.ಗಳ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಹಾಗೂ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಡಳಿತದ ಮೂಲಗಳು ಖಚಿತಪಡಿಸಿವೆ.
ನರೇಂದ್ರ ಮೋದಿ ಸೆ.2ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭ ಮಂಗಳೂರಿನಲ್ಲಿ ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಿದ್ದೇವೆ. ಅದಕ್ಕಾಗಿ ಎಲ್ಲ ತಯಾರಿಯೂ ಆರಂಭಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದ್ದಾರೆ.