​ಜೂನಿಯರ್ ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ

Update: 2022-08-22 15:54 GMT

ಉಡುಪಿ, ಆ.22: ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರದ ವತಿಯಿಂದ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್- https://ssc.nic.in -ಮತ್ತು -www.ssckkr.kar.nic.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿ ಗಳಲ್ಲಿ ಉತ್ತೀರ್ಣರಾಗಿರುವ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟಂಬರ್ 2 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:080-25502520, 9483862020ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News