×
Ad

ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿ ಹೇಳಿಕೆ: ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ

Update: 2022-08-23 10:30 IST

ಹೊಸದಿಲ್ಲಿ: ಪ್ರವಾದಿ ಮುಹಮ್ಮದ್ ಅವರ ಕುರಿತು  ಅವಹೇಳನಕಾರಿ ಹೇಳಿಕೆ (derogatory comments against Prophet Muhammad)ನೀಡಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ನನ್ನು(Telangana BJP MLA T Raja Singh) ಮಂಗಳವಾರ  ಬಂಧಿಸಲಾಗಿದೆ.  ಸಿಂಗ್ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಹೈದರಾಬಾದ್‌ನಲ್ಲಿ ನಿನ್ನೆ ರಾತ್ರಿ ನಡೆದ ಭಾರೀ ಪ್ರತಿಭಟನೆ ನಂತರ ಎಫ್ ಐಆರ್ ದಾಖಲಿಸಿ ಬಂಧಿಸಲಾಗಿದೆ.

ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿರುವುದಕ್ಕೆ  U/s 295(a), 153(a) & ಇತರೆ ಸೆ್ಕ್ಷನ್ ಗಳಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ ತಿಳಿಸಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳ ವೀಡಿಯೊವನ್ನು ಸಿಂಗ್ ಬಿಡುಗಡೆ ಮಾಡಿದ ನಂತರ ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ  ಎದುರು ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು.

ರಾಜಾ ಸಿಂಗ್, ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ ಹಾಗೂ ಆತನನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News