×
Ad

ತಿಂಗಳೊಳಗೆ ಸುರತ್ಕಲ್ ಟೋಲ್ ವಿಲೀನ: ದಿಶಾ ಸಭೆಯಲ್ಲಿ ಚರ್ಚೆ

Update: 2022-08-23 12:19 IST

ಮಂಗಳೂರು: ಸಾರ್ವಜನಿಕರ ತೀವ್ರ ವಿರೋಧಕ್ಕೆ ಕಾರಣವಾಗಿರುವ ಸುರತ್ಕಲ್ ಟೋಲನ್ನು ಹೆಜಮಾಡಿ ಜತೆ ಒಂದು ತಿಂಗಳೊಳಗೆ ವಿಲೀನಕ್ಕೆ ನಿರ್ಧರಿಸಲಾಗಿದೆ.

ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ  ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ)ಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.

ಎನ್ ಎಚ್ ಐ ಅಧಿಕಾರಿ ಲಿಂಗೇಗೌಡ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿಯೊಂದಿಗೆ ಚರ್ಚೆ ಮಾಡಲಾಗಿದೆ. ಟೋಲ್ ವಿಲೀನದ ಬಗ್ಗೆ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ. ಒಂದು ತಿಂಗಳ ಅವಧಿಯೊಳಗೆ ಸುರತ್ಕಲ್ ಟೋಲ್ ಅನ್ನು ಬೇರೆ  ಟೋಲ್ ನೊಂದಿಗೆ ವಿಲೀನಕ್ಕೆ ಸೂಚಿಸಲಾಗಿದೆ ಎಂದು ಅಧಿಕಾರಿ ಲಿಂಗೇಗೌಡ ಹೇಳಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು‌ ಮಟ್ಟದ ಅಧಿಕಾರಿಗಳು, ದಿಶಾ ಸಭೆಯ ನಾಮನಿರ್ದೇಶಿತ ಸದಸ್ಯರು ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News