ಬೆದರಿಕೆ ಹಿನ್ನೆಲೆ: ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತೆ

Update: 2022-08-23 12:04 GMT

ಬೆಂಗಳೂರು, ಆ.23: ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ನಿವಾಸಕ್ಕೆ ಭದ್ರತೆ ಒದಗಿಸಿರುವ ರಾಜ್ಯ ಸರಕಾರ ಇದೀಗ ಇನ್ನಷ್ಟು ಮುಂಜಾಗ್ರತ ಕ್ರಮ ಕೈಗೊಂಡು ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ.

ಈಗಾಗಲೇ ಸಿದ್ದರಾಮಯ್ಯಗೆ ಹೆಚ್ಚಿನ ಭದ್ರತೆ ಒದಗಿಸಿರುವ ರಾಜ್ಯ ಸರಕಾರ ಹೆಚ್ಚುವರಿ ಭದ್ರತಾ ಸಿಬ್ಬಂದಿ ಒದಗಿಸಿತ್ತು. ಇದೀಗ ಶಿವಾನಂದ ವೃತ್ತ ಸಮೀಪದಲ್ಲಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರಿ ನಿವಾಸಕ್ಕೆ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. 

ಸಿದ್ದರಾಮಯ್ಯಗೆ ಜೀವ ಬೆದರಿಕೆ ಹಾಗೂ ಮೊಟ್ಟೆ ಎಸೆತ ಪ್ರಕರಣದ ಹಿನ್ನೆಲೆಯಲ್ಲಿ ಈ ಭದ್ರತೆ ಒದಗಿಸಿದ್ದು, ಪ್ರತಿಪಕ್ಷ ನಾಯಕರ ನಿವಾಸಕ್ಕೆ ಸದಾ ಸಾರ್ವಜನಿಕರ ಭೇಟಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. 

► ನಿಷೇಧಾಜ್ಞೆ ಪಾಲಿಸ್ತೀವಿ, ಆಗಸ್ಟ್‌ 26ಕ್ಕೆ 'ಕೊಡಗು ಚಲೋ' ಇಲ್ಲ: ಸಿದ್ದರಾಮಯ್ಯ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News