×
Ad

ಉಚಿತ ವಿದ್ಯುತ್‌ಗಾಗಿ ಹೆಸರು ನೋಂದಾಯಿಸಲು ಸೂಚನೆ

Update: 2022-08-23 20:54 IST

ಮಂಗಳೂರು : ಸರಕಾರದ ಅಮೃತ ಜ್ಯೋತಿ ಯೋಜನೆಯಲ್ಲಿ ಘೋಷಿಸಿದಂತೆ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭಾಗ್ಯಜ್ಯೋತಿ ಕುಟೀರ ಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) 2022ರ ಮೇ 1ರಿಂದ ಅನ್ವಯವಾಗುವಂತೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು.

ಅರ್ಹ ಗ್ರಾಹಕರು ಸುವಿಧಾ ಪೊರ್ಟಲ್‌ನಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದಾಗಿದೆ ಅಥವಾ ಆಧಾರ್ ಕಾರ್ಡ್‌ನಲ್ಲಿ ನೋಂದಣಿಯಾಗಿರುವ ಮೊಬೈಲ್‌ನೊಂದಿಗೆ ಸಮೀಪದ ಮೆಸ್ಕಾಂ ಉಪವಿಭಾಗದ ಕಾರ್ಯ ಮತ್ತು ಪಾಲನಾ ಶಾಖೆಯನ್ನು ಭೇಟಿ ಮಾಡಿ ನೋಂದಣಿ ಮಾಡಿಸಬಹುದು ಎಂದು ಮೆಸ್ಕಾಂನ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News