×
Ad

CETಗೆ ಪಿಯು ಅಂಕ ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Update: 2022-08-23 21:02 IST

ಬೆಂಗಳೂರು, ಆ.23: ಕಳೆದ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆ ಬರೆಯದೆ ಉತ್ತೀರ್ಣರಾಗಿರುವ ಪಿಯು ವಿದ್ಯಾರ್ಥಿಗಳು ಗಳಿಸಿರುವ ಶೇ.25 ಅಂಕ ಹಾಗೂ ಈ ಸಾಲಿನ ಸಿಇಟಿಯಲ್ಲಿ ಅವರು ಪಡೆದಿರುವ ಶೇ.75 ಅಂಕಗಳನ್ನು ಪರಿಗಣಿಸಿ ರ್ಯಾಂಕ್ ಪಟ್ಟಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ಕೆಇಎ ಹೈಕೋರ್ಟ್ ಹೇಳಿದೆ. ಮತ್ತೊಂದೆಡೆ, ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಪೀಠ, ಆದೇಶವನ್ನು ಕಾಯ್ದಿರಿಸಿದೆ. 

2020-21ನೆ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೆ ಸಾಲಿನ ಸಿಇಟಿ ಫಲಿತಾಂಶಕ್ಕೆ ಪರಿಗಣಿಸದ ಕೆಇಎ ಕ್ರಮ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್.ಈಶ್ವರ್ ಸೇರಿ ಹಲವರು ಪ್ರತ್ಯೇಕವಾಗಿ ಹೈಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದರು. 

ಕಳೆದ ವಿಚಾರಣೆ ವೇಳೆ ಹೈಕೋರ್ಟ್, ಸಿಇಟಿ ಅಂಕ ಪರಿಗಣಿಸಿದರೆ ಎಲ್ಲರಿಗೂ ಸಹಮತದ ಸೂತ್ರವನ್ನು ಸರಕಾರ ಕಂಡುಕೊಳ್ಳಬಹುದು ಎಂದು ಹೇಳಿತ್ತು. ಮತ್ತೆ ಅರ್ಜಿ ವಿಚಾರಣೆಗೆ ಬಂದಾಗ ಅರ್ಜಿದಾರರ ಪರ ವಕೀಲರು, ಕೆಇಎ ನೀತಿ ತಾರತಮ್ಯದಿಂದ ಕೂಡಿದ್ದು, ಕಾನೂನುಬಾಹಿರವಾಗಿದೆ ಎಂದರು. ವಕೀಲರ ವಾದ ಆಲಿಸಿದ ನ್ಯಾಯಪೀಠ, ವಿಚಾರಣೆ ಪೂರ್ಣಗೊಳಿಸಿ ನ್ಯಾಯಪೀಠ ತೀರ್ಪು ಕಾಯ್ದಿರಿಸಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News