×
Ad

ಮಾದಕ ದ್ರವ್ಯದ ವಿರುದ್ಧ ವಿಶೇಷ ಕಾರ್ಯಾಚರಣೆ: ಉಡುಪಿ ಜಿಲ್ಲೆಯಲ್ಲಿ 40 ಮಂದಿ ವಶಕ್ಕೆ

Update: 2022-08-23 21:37 IST

ಉಡುಪಿ, ಆ.23: ಮಾದಕ ದ್ರವ್ಯದ ವಿರುದ್ಧ ಉಡುಪಿ ಜಿಲ್ಲಾ ಪೊಲೀಸರು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿ ಒಟ್ಟು 40 ಮಂದಿ ವಿರುದ್ಧ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಆ.20ರಂದು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪು ಬಳಿ ವಿನಯ ನಗರದ ಮುಸ್ತಾಫ್ (30), ಅಶ್ರಫ್(35), ಉಡುಪಿ ನಗರ ಠಾಣಾ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಅನಂತಕೃಷ್ಣ ನಗರದ ಬಳಿ ಸ್ಥಳೀಯ ನಿವಾಸಿ ಇರ್ಷಾದ್ ಖಾನ್(32), ನಗರದ ಬೋರ್ಡ್ ಹೈಸ್ಕೂಲ್ ಬಳಿ ಶಿರಿಬೀಡುವಿನ ಶರ್ವೀನ್ (20), ಕುಂಜಿಬೆಟ್ಟು ಎಂಜಿಎಂ ಕಾಲೇಜು ಎದುರು ಮಾರ್ಪಳ್ಳಿಯ ಸಮೀದ್ (20) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆ.21ರಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಜಂಕ್ಷನ್ ಬಳಿ ರೋಬನ್ ಡಿ ಅಲ್ಮೇಡಾ(21), ಉಡುಪಿ ಸೆನ್ ಪೊಲೀಸರು ಕಾರ್ಕಳ ರಾಮಸಮುದ್ರ ಕೆರೆಯ ಬಳಿ ಮಟ್ಪಾಡಿ ಗ್ರಾಮದ ಯೊಗೀಶ್ ಗಾಣಿಗ(25), ಶಿವಮೊಗ್ಗ ಜಿಲ್ಲೆಯ ಹೊಸನಗರದ ಶ್ರೇಯಸ್(20), ಕೊಪ್ಪ ತಾಲೂಕಿನ ನಂದೀಶ್(22) ಎಂಬವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಇವರೆಲ್ಲ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾರಾಂತ್ಯದಲ್ಲಿ ಮಾದಕ ದ್ರವ್ಯದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ಸಂಬಂಧ ಒಟ್ಟು 40 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರವಾಸಿ ತಾಣಗಳು, ಶಿಕ್ಷಣ ಸಂಸ್ಥೆಗಳ ಪರಿಸರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ವಿಶೇಷ ನಿಗಾ ವಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿಯಾಗಿ ಕಾರ್ಯಾಚರಣೆಯನ್ನು ಮುಂದುವರೆಸಲಾಗುವುದು.

ಹಾಕೆ ಅಕ್ಷಯ್ ಮಚ್ಚಿಂದ್ರ, ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News