ಉಕ್ರೇನ್‌ನಿಂದ ತೆರಳುವಂತೆ ಅಮೆರಿಕ ಪ್ರಜೆಗಳಿಗೆ ಸೂಚನೆ

Update: 2022-08-23 16:54 GMT

ಕೀವ್, ಆ.೨೩: ಮುಂಬರುವ ಉಕ್ರೇನ್ ಸ್ವಾತಂತ್ರ್ಯಯ ದಿನಾಚರಣೆ ಸಂದರ್ಭದಲ್ಲಿ ಉಕ್ರೇನ್ ಮೇಲಿನ ರಶ್ಯದ ದಾಳಿ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಅಮೆರಿಕನ್ ಪ್ರಜೆಗಳು ತಕ್ಷಣ ಅಲ್ಲಿಂದ ಹೊರಡುವಂತೆ ಉಕ್ರೇನ್‌ನಲ್ಲಿನ ಅಮೆರಿಕದ ರಾಯಭಾರ ಕಚೇರಿ ಎಚ್ಚರಿಕೆ ನೀಡಿದೆ.

ಮುಂದಿನ ದಿನಗಳಲ್ಲಿ ರಶ್ಯವು ಉಕ್ರೇನ್‌ನ ನಾಗರಿಕ ಮೂಲಸೌಕರ್ಯ ಮತ್ತು ಸರಕಾರಿ ಸಂಸ್ಥೆಗಳ ಮೇಲಿನ ದಾಳಿಯನ್ನು ಹೆಚ್ಚಿಸಲು ಪ್ರಯತ್ನಿಸಲಿದೆ ಎಂಬ ಬಗ್ಗೆ ಅಮೆರಿಕದ ವಿದೇಶಾಂಗ ಇಲಾಖೆಗೆ ಮಾಹಿತಿ ಲಭಿಸಿದೆ. ಆದ್ದರಿಂದ ಉಕ್ರೇನ್‌ನಲ್ಲಿ ಲಭ್ಯವಿರುವ  ಖಾಸಗಿ ಸಾರಿಗೆ ವ್ಯವಸ್ಥೆಯನ್ನು ಬಳಸಿಕೊಂಡು ಅಮೆರಿಕದ ಪ್ರಜೆಗಳು ಅಲ್ಲಿಂದ ತೆರಳಬೇಕೆಂದು ಸೂಚಿಸಲಾಗಿದೆ ಎಂದು ಅಮೆರಿಕದ ರಾಯಭಾರ ಕಚೇರಿಯ ವೆಬ್‌ಸೈಟ್‌ನಲ್ಲಿ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.

ಸೋವಿಯಟ್ ಒಕ್ಕೂಟದಿಂದ ಸ್ವತಂತ್ರಗೊಂಡ ದಿನವಾದ ಆಗಸ್ಟ್ ೨೪ರಂದು ಯಾವುದೇ ಸಾರ್ವಜನಿಕ ಸಮಾರಂಭ ನಡೆಸುವುದನ್ನು ಉಕ್ರೇನ್ ನಿಷೇಧಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News