×
Ad

ಸೆ.11 ರಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

Update: 2022-08-23 23:08 IST

ಬೆಂಗಳೂರು, ಆ.23: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಸೆ.11ರಂದು ನಗರದ ಅರಮನೆ ಮೈದಾನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ತಿಳಿಸಿದ್ದಾರೆ. 

ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣಾ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಸಚಿವರು, ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿಣಿ ಸದಸ್ಯರು ಮತ್ತು ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News