ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿರುವ ಸೋನಿಯಾ ಗಾಂಧಿ

Update: 2022-08-24 04:51 GMT
Photo:PTI

 ಹೊಸದಿಲ್ಲಿ: ವೈದ್ಯಕೀಯ ತಪಾಸಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Congress president Sonia Gandhi)ವಿದೇಶಕ್ಕೆ ತೆರಳಲಿದ್ದು, ರಾಹುಲ್ ಗಾಂಧಿ ಹಾಗೂ  ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ತೆರಳಲಿದ್ದಾರೆ ಎಂದು ಪಕ್ಷ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

ಹೇಳಿಕೆಯಲ್ಲಿ ಯಾವುದೇ ನಿರ್ದಿಷ್ಟ ಪ್ರಯಾಣದ ದಿನಾಂಕ ಅಥವಾ ಅವರ ಭೇಟಿಯ ಸ್ಥಳಗಳನ್ನು ಬಹಿರಂಗಪಡಿಸಲಾಗಿಲ್ಲ. ಆದರೆ ಸೆಪ್ಟೆಂಬರ್ 4, 2022 ರಂದು ಇಲ್ಲಿ ಕಾಂಗ್ರೆಸ್‌ನ 'ಮೆಹಂಗೈ ಪರ್ ಹಲ್ಲಾ ಬೋಲ್' ರ್ಯಾಲಿಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.

"ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ಹೊಸದಿಲ್ಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಕೂಡ  ಭೇಟಿ ಮಾಡುತ್ತಾರೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Congress general secretary Jairam Ramesh)ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಹಾಗೂ  ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಪ್ರಯಾಣಿಸಲಿದ್ದಾರೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿ ಅವರು ಸೆಪ್ಟೆಂಬರ್ 4, 2022 ರಂದು ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ನ 'ಮೆಹಂಗೈ ಪರ್ ಹಲ್ಲಾ ಬೋಲ್' ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಮೇಶ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News