ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ತನಿಖೆ ನಡೆಸಲಾಗುತ್ತಿದೆ: ಗೋವಾ ಮುಖ್ಯಮಂತ್ರಿ
ಪಣಜಿ: ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ಕುರಿತು ರಾಜ್ಯ ಪೊಲೀಸರು ವಿವರವಾದ ತನಿಖೆ ನಡೆಸುತ್ತಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Goa Chief Minister Pramod Sawant)ಬುಧವಾರ ಹೇಳಿದ್ದಾರೆ.
ವೈದ್ಯರು ಹಾಗೂ ಗೋವಾ ಪೊಲೀಸ್ ಮಹಾನಿರ್ದೇಶಕ ಜಸ್ಪಾಲ್ ಸಿಂಗ್ ಅವರ ಅಭಿಪ್ರಾಯವನ್ನು ಪರಿಗಣಿಸಿದರೆ, ಸೋನಾಲಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕವಾಗಿ ಕಂಡುಬಂದಿದೆ ಎಂದು ಪ್ರಮೋದ್ ಸಾವಂತ್ ಸುದ್ದಿಗಾರರಿಗೆ ತಿಳಿಸಿದರು.
ಟಿಕ್‌ಟಾಕ್‌ನಲ್ಲಿ ಖ್ಯಾತಿ ಪಡೆದಿದ್ದ ಹರ್ಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ (42 ವರ್ಷ)Sonali Phogat (42), the BJP leader from Haryana ಅವರನ್ನು ಮಂಗಳವಾರ ಬೆಳಿಗ್ಗೆ ಉತ್ತರ ಗೋವಾದ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ ಶಂಕಿತ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಈ ಹಿಂದೆ ತಿಳಿಸಿದ್ದಾರೆ.
ಬುಧವಾರ ಗೋವಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಸೋನಾಲಿ ಫೋಗಟ್ ಅವರ ಕುಟುಂಬ ಸದಸ್ಯರು ಮಂಗಳವಾರ ರಾತ್ರಿ ಗೋವಾಕ್ಕೆ ಆಗಮಿಸಿದ್ದಾರೆ.
ಸೋನಾಲಿ ಫೋಗಟ್ ಆಗಸ್ಟ್ 22 ರಂದು ಗೋವಾಕ್ಕೆ ಆಗಮಿಸಿದ್ದರು ಹಾಗೂ ಅಂಜುನಾ ಪ್ರದೇಶದ ಹೋಟೆಲ್‌ನಲ್ಲಿ ತಂಗಿದ್ದರು. ಸೋನಾಲಿಗೆ ಅಸ್ವಸ್ಥತೆ ಕಂಡುಬಂದ ನಂತರ ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಅವರನ್ನು ಹೋಟೆಲ್‌ನಿಂದ ಆಸ್ಪತ್ರೆಗೆ ಕರೆತರಲಾಯಿತು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಿವ್ಬಾ ದಳವಿ ಹೇಳಿದ್ದಾರೆ.