×
Ad

ಅನ್ನಭಾಗ್ಯ ಯೋಜನೆ ನಿಲ್ಲಿಸುವ ಯೋಚನೆ ಮಾಡಿದರೂ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ: ಸಿದ್ದರಾಮಯ್ಯ

Update: 2022-08-24 15:29 IST

ಬೆಂಗಳೂರು, ಆ.24: ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೂ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ ಎಂದು ವಿಧಾನಸಭಾ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಎಚ್ಚರಿಸಿದ್ದಾರೆ.

ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಕೇಂದ್ರ ಸರಕಾರ ಒಪ್ಪಿದರೆ ಅನ್ನಭಾಗ್ಯ ಯೋಜನೆಯನ್ನು ಬಂದ್ ಮಾಡುವುದಾಗಿ ರಾಜ್ಯ ಆರೋಗ್ಯ ಸಚಿವ ವಿ.ಉಮೇಶ್ ಕತ್ತಿ ಹೇಳಿಕೆಯನ್ನು ಆಕ್ಷೇಪಿಸಿ ಸಿದ್ದರಾಮಯ್ಯ ಸರಣಿ ಟ್ವೀಟ್(Tweet) ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೇರಲು 20 ಕೋಟಿ, ಇತರರನ್ನು ಕರೆತಂದರೆ 25 ಕೋಟಿ ರೂ. ಆಮಿಷ: ಎಎಪಿ ಆರೋಪ

ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಲೇ ಇದ್ದ ರಾಜ್ಯ ಬಿಜೆಪಿ ನಾಯಕರು ಈ ಯೋಜನೆ ನಿಲ್ಲಿಸಲು ನೆಪಗಳನ್ನು ಹುಡುಕುತ್ತಿರುತ್ತಾರೆ. ರಾಜ್ಯದ ಆಹಾರ ಸಚಿವ ಉಮೇಶ್ ಕತ್ತಿ ಅವರಿಗೆ ಅಂತಹದ್ದೊಂದು ನೆಪ ಸುಪ್ರೀಂ ಕೋರ್ಟ್ ನ ಆದೇಶದಲ್ಲಿ ಸಿಕ್ಕಿದ್ದಕ್ಕೆ ಸಂತಸ ಪಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೂ.2,65,000 ಕೋಟಿ ಗಾತ್ರದ ಬಜೆಟ್ ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವುದು ರೂ.2,800 ಕೋಟಿ ಮಾತ್ರ. ಇಷ್ಟು ಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ  ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು? ಎಂದು ಪ್ರಶ್ನಿಸಿದ್ದಾರೆ.

ಅಭಿವೃದ್ದಿ ಚಟುವಟಿಕೆಗಳು ಸ್ಥಗಿತಗೊಂಡು, ಕಲ್ಯಾಣ ಕಾರ್ಯಕ್ರಮಗಳು ದುಡ್ಡಿಲ್ಲದೆ ನನೆಗುದಿಗೆ ಬೀಳಲು ಕಾರಣ ರಾಜ್ಯ ಬಿಜೆಪಿ ಸರಕಾರದ ಕಮಿಷನ್ ದಾಹ. 40 ಶೇ. ಕಮಿಷನ್ ಈಗ ಶೇ.50ಕ್ಕೆ ಏರಿದೆಯಂತೆ. ಉಮೇಶ್ ಕತ್ತಿಯಂತಹ ಬೇಜವಾಬ್ದಾರಿ ಸಚಿವರು ಅನ್ನಭಾಗ್ಯ ಯೋಜನೆ ನಿಲ್ಲಿಸಲು ಹೊರಟಿದ್ದಾರೆ. ಸಚಿವ ಉಮೇಶ್ ಕತ್ತಿಯವರೇ ಬಡವರ ಹೊಟ್ಟೆಗೆ ಹೊಡೆಯುವ ನಿಮ್ಮ ದುಷ್ಟತನದ ಕತ್ತಿಯನ್ನು ಒರೆಯಲ್ಲಿಟ್ಟುಬಿಡಿ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೂ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ.. ಎಚ್ಚರ ಇರಲಿ...!! ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News