×
Ad

ದ.ಕ.ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಚುನಾವಣೆ; ಅಸಿಂಧು ಎಂದ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ

Update: 2022-08-24 17:34 IST

ಮಂಗಳೂರು : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣಾ ಪ್ರಕ್ರಿಯೆಯು ನಿಯಮಾನಸಾರ ನಡೆದಿಲ್ಲ ಹಾಗೂ ಸಂಘದ ಬೈಲಾ ನಿಯಮಗಳಡಿ ಮತದಾರರ ಪಟ್ಟಿಯನ್ನು ತಯಾರಿಸಿಲ್ಲ ಎಂಬುದಾಗಿ ಮಾನ್ಯ ಮಂಗಳೂರಿನ ಸಿವಿಲ್ ನ್ಯಾಯಾಲಯವು ಘೋಷಿಸಿದ್ದು ಪದಾಧಿಕಾರಿಗಳ ಚುನಾವಣೆಯನ್ನು ನಿಯಮಾನುಸಾರ ನಡೆಸುವಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಪ್ರಕ್ರಿಯೆ ಮುಕ್ತ, ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆದಿಲ್ಲವೆಂದು ಬಂದರು ಇಲಾಖೆಯ ಅಧಿಕಾರಿ ಎಸ್.ನಿರಂಜನ ಮೂರ್ತಿ ಅವರು ಜಿಲ್ಲಾ ಸಂಘ ಹಾಗೂ ಚುನಾವಣಾ ಅಧಿಕಾರಿಗಳ ವಿರುದ್ಧ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ದಾವೆಯ ವಿಚಾರಣೆಯನ್ನು ನಡೆಸಿ ದಿನಾಂಕ 24.8.2022 ರಂದು ತೀರ್ಪು ನೀಡಿದ ಮಾನ್ಯ ಪ್ರಧಾನ ನ್ಯಾಯಾಲಯವು ನಿಯಮಾನುಸಾರ ಚುನಾವಣಾ ಪ್ರಕ್ರಿಯೆ ನಡೆದಿಲ್ಲ ಎಂದು ಘೋಷಿಸಿ ಮತ್ತೆ ಚುನಾವಣೆ ನಡೆಸುವಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News