ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2022-08-24 15:46 GMT

ಬೆಂಗಳೂರು, ಆ.24: 2022-23ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನಲ್ಲಿ ಕಾನೂನು, ಕನ್ನಡ, ಇಂಗ್ಲಿಷ್, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ ಮತ್ತು ಅರ್ಥಶಾಸ್ತ್ರದಲ್ಲಿ ಬೋಧಿಸಲು ಪೂರ್ಣಕಾಲಿಕ, ಅರೆಕಾಲಿಕ ಅತಿಥಿ ಉಪನ್ಯಾಸಕರ (Guest Lecture) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.bangaloreuniversity.ac.in ಅಥವಾ ulcbangalore.com ನಿಂದ ಡೌನ್‍ಲೋಡ್ ಮಾಡಿಕೊಂಡು ಸಂಬಂಧಿತ ದಾಖಲೆಗಳ ಪ್ರತಿಯೊಂದಿಗೆ ಪ್ರಾಂಶುಪಾಲರು, ವಿಶ್ವವಿದ್ಯಾಲಯ ಕಾನೂನು ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನ ಭಾರತಿ ಕ್ಯಾಂಪಸ್ ಬೆಂಗಳೂರು  ಇಲ್ಲಿಗೆ ದಿನಾಂಕ ಆ.29ರೊಳಗೆ ಸಲ್ಲಿಸಲು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News