ಹಣ ಅಕ್ರಮ ವರ್ಗಾವಣೆ ಪ್ರಕರಣ: ಹೈಕೋರ್ಟ್‌ನಿಂದ ಅರ್ಜಿ ಹಿಂಪಡೆದ ಕಾರ್ತಿ ಚಿದಂಬರಂ
Update: 2022-08-24 22:46 IST
ಹೊಸದಿಲ್ಲಿ, ಆ. 24: ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ತಮ್ಮ ವಿರುದ್ಧ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ದಿಲ್ಲಿ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ಹಿಂಪಡೆದಿದ್ದಾರೆ.
ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯವು ವಿಚಾರಣಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ. ಜಾಮೀನು ಕೋರಿ ನಾವು ಸಲ್ಲಿಸಿರುವ ಅರ್ಜಿಯು ಬಾಕಿ ಇದ್ದು, ಅದರ ವಿಚಾರಣೆ ನಡೆಸಲು ನ್ಯಾಯಲಯ ಒಪ್ಪಿಗೆ ನೀಡಿದೆ. ಆದುದರಿಂದ ನಾವು ಅರ್ಜಿ ಹಿಂಪಡೆಯುತ್ತಿದ್ದೇವೆ ಎಂದು ಕಾರ್ತಿ ಚಿದಂಬರಂ ಅವರನ್ನು ಪ್ರತಿನಿಧಿಸಿದ್ದ ನ್ಯಾಯವಾದಿ ಅರ್ಷದೀಪ್ ಸಿಂಗ್ ಅವರು ಹೇಳಿದ್ದಾರೆ.