"ಅಗ್ನಿಪಥ್ ದೌಡ್" ಎರಡನೇ ದಿನದ ಓಟಕ್ಕೆ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಬಳಿ ಚಾಲನೆ

Update: 2022-08-25 04:22 GMT

ಉಡುಪಿ, ಆ.25: ಉಡುಪಿ ಜಿಲ್ಲಾ ರಜತ ಮಹೋತ್ಸವ ಸಂದರ್ಭ ಯುವ ಜನತೆಯನ್ನು ಸೈನ್ಯಕ್ಕೆ ಆಕರ್ಷಿಸುವ ನಿಟ್ಟಿನಲ್ಲಿ ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸಲು ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಮತ್ತು ಟೀಮ್ ನೇಶನ್ ಫಸ್ಟ್ ಸಹಭಾಗಿತ್ವದಲ್ಲಿ ಬುಧವಾರ ಕಾರ್ಕಳದಿಂದ ಆರಂಭವಾದ 75 ಕೀ.ಮೀ. ಮ್ಯಾರಥಾನ್ ಓಟ "ಅಗ್ನಿಪಥ್ ದೌಡ್" ನ ಎರಡನೇ ದಿನದ ಓಟಕ್ಕೆ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಇಂದು ಚಾಲನೆ ನೀಡಲಾಯಿತು.

ಉದ್ಯಮಿ ಪುರುಷೋತ್ತಮ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ ಅವರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ಚಾಲನೆ ನೀಡಿದರು ಶುಭ ಹಾರೈಸಿದರು.

ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ ಅವರು ಅಗ್ನಿಪಥ್ ದೌಡ್ ಓಟದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಅಂಡಾರು ದೇವಿಪ್ರಸಾದ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ನಗರ ಸಭಾ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ, ರಶ್ಮಿ ಚಿತ್ತರಂಜನ್ ಭಟ್, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯ ದೇವದಾಸ್ ಶೆಟ್ಟಿಗಾರ್,ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

"ಅಗ್ನಿಪಥ್ ದೌಡ್" ಉಡುಪಿ ಕ್ಲಾಕ್ ಟವರ್ ಬಳಿ ತಲುಪಿದಾಗ  ಧರ್ಮಗುರುಗಳಾದ ಅ.ವಂ. ಸ್ಟ್ಯಾನಿ ಬಿ ಲೋಬೊ, ಮಣಿಪಾಲ ಚರ್ಚ್ ಧರ್ಮ ಗುರುಗಳಾದ ರೋಮಿಯೋ ಲೂವೀಸ್ ಹಾಗೂ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ ಶಂಕರ್ ಉಪಸ್ಥಿತರಿದ್ದು ಶುಭ ಹಾರೈಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News