×
Ad

ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷರಾಗಿ ಭೂಪೇಂದ್ರ ಚೌಧರಿ ನೇಮಕ ಸಾಧ್ಯತೆ

Update: 2022-08-25 10:25 IST
Photo:twitter

ಹೊಸದಿಲ್ಲಿ:  ಆದಿತ್ಯನಾಥ್ ನೇತೃತ್ವದ ಸರಕಾರದಲ್ಲಿ ಸಚಿವರಾಗಿರುವ ಭೂಪೇಂದ್ರ ಚೌಧರಿ ಅವರನ್ನು ಬಿಜೆಪಿಯ ಉತ್ತರ ಪ್ರದೇಶ ಘಟಕದ ಮುಖ್ಯಸ್ಥರನ್ನಾಗಿ (BJP's Uttar Pradesh unit chief)ನೇಮಿಸುವ ಸಾಧ್ಯತೆಯಿದೆ. ಬಿಜೆಪಿ ವರಿಷ್ಠರು ಮುಖ್ಯಮಂತ್ರಿ ಆದಿತ್ಯನಾಥ್ ಹಾಗೂ  ಚೌಧರಿ ಅವರನ್ನು ದಿಲ್ಲಿಗೆ ಕರೆಸಿ ಚರ್ಚಿಸಿದ್ದಾರೆ ಎಂದು India Today ವರದಿ ಮಾಡಿದೆ.

ಪಶ್ಚಿಮ ಉತ್ತರ ಪ್ರದೇಶದ ಜಾಟ್ ನಾಯಕ ಭೂಪೇಂದ್ರ ಚೌಧರಿ ಅವರು ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರನ್ನು ಬುಧವಾರ ಅವರ ನಿವಾಸದಲ್ಲಿ ಭೇಟಿಯಾದರು. ಪಕ್ಷದ ಮೂಲಗಳ ಪ್ರಕಾರ, ಶೀಘ್ರದಲ್ಲೇ ಚೌಧರಿ ಅವರನ್ನು ಪಕ್ಷದ ಹುದ್ದೆಗೆ ನೇಮಿಸಲಾಗುವುದು.

ಪಶ್ಚಿಮ ಉತ್ತರಪ್ರದೇಶದಲ್ಲಿ 25 ಸ್ಥಾನಗಳಲ್ಲಿ ಜಾಟ್ ಸಮುದಾಯದ ಪ್ರಭಾವವಿದೆ. ಇದಲ್ಲದೆ, 2024 ರ ಚುನಾವಣೆಗೆ ಮುಂಚಿತವಾಗಿ ಉತ್ತರಪ್ರದೇಶದಲ್ಲಿ ರಾಜ್ಯಾಧ್ಯಕ್ಷರ ಕುರಿತಂತೆ ಯಾವುದೇ ಅಪಾಯವನ್ನು ತೆಗೆದುಕೊಳ್ಳಲು ಬಿಜೆಪಿ ಬಯಸುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News