ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2022-08-25 10:50 IST
ಬೆಳ್ತಂಗಡಿ : ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಾಫಿನಡ್ಕ ತೆಂಕಕಾರಂದೂರು ನಿವಾಸಿ ರಮಾನಂದ (42) ಅವರು ಮನೆ ಸಮೀಪದ ಬಾವಿಗೆ ಅಕಸ್ಮಿಕವಾಗಿ ಬಿದ್ದಿರುವ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ರಮಾನಂದರು ಸಂಜೆಯ ನಂತರ ನಾಪತ್ತೆಯಾಗಿದ್ದು, ಇದರಿಂದ ಅತಂಕಗೊಂಡ ಮನೆ ಮಂದಿ ಹುಡುಗಾಟ ನಡೆಸಿದೆರೆನ್ನಲಾಗಿದೆ. ರಾತ್ರಿ ವೇಳೆ ರಮಾನಂದರ ಚಪ್ಪಲಿ ಬಾವಿ ಸಮೀಪ ಪತ್ತೆಯಾಗಿದ್ದು, ನಂತರ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಲಾಯಿತು.
ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.