ತುಮಕೂರು ಭೀಕರ ಅಪಘಾತ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Update: 2022-08-25 06:13 GMT

ನವದೆಹಲಿ, ಆ.25: ತುಮಕೂರು (Tumakuru) ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲೇನಹಳ್ಳಿ ಗೇಟ್ ಬಳಿ  ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು,  ಮೃತಪಟ್ಟ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,  'ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.  ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರಿಗೆ 'ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ'ಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು' ಎಂದು ತಿಳಿಸಿದ್ದಾರೆ. 

ಇಂದು ( ಗುರುವಾರ) ಬೆಳಗಿನ ಜಾವ ಬೆಂಗಳೂರು  ಕಡೆಗೆ ಹೋಗುತ್ತಿದ್ದ ಕ್ರೂಸರ್ (trax cruiser) ವಾಹನಕ್ಕೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲೇನಹಳ್ಳಿ ಗೇಟ್ ಬಳಿ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ ಸುಮಾರು 9 ಮಂದಿ ಸ್ಥಳದಲ್ಲೇ ಮೃತಪಟ್ಟು, 14 ಜನ ಗಾಯಗೊಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News