×
Ad

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರು

Update: 2022-08-25 11:45 IST

ಮಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್,  ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸ್ವಾಗತಿಸಿದರು.

ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ನಂತರ ರಾಜ್ಯಪಾಲರು ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News