ಸೆಪ್ಟೆಂಬರ್‌ 12ರಿಂದ ವಿಧಾನ ಮಂಡಲ ಅಧಿವೇಶನ: ಸಂಪುಟ ಸಭೆಯಲ್ಲಿ ತೀರ್ಮಾನ

Update: 2022-08-25 11:55 GMT

ಬೆಂಗಳೂರು, ಆ. 25: ‘ವಿಧಾನ ಮಂಡಲ ಉಭಯ ಸದನಗಳ ಅಧಿವೇಶನವನ್ನು ಸೆಪ್ಟಂಬರ್ 12ರಿಂದ ಹತ್ತು ದಿನಗಳ ಕಾಲ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.

ಗುರುವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಬಳಿಕ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ‘ಸೆ.12ರಿಂದ(ಶನಿವಾರ ಮತ್ತು ರವಿವಾರ ಹೊರತುಪಡಿಸಿ) ಸೆ.23ರ ವರೆಗೆ ಎರಡು ವಾರಗಳ ಕಾಲ ಅಧಿವೇಶನ ಕಲಾಪ ನಡೆಯಲಿದ್ದು, ಕೆಲ ವಿಧೇಯಕಗಳ ಮಂಡನೆಯೂ ಸೇರಿದಂತೆ ರಾಜ್ಯದ ಹಲವು ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ' ಎಂದು ಹೇಳಿದರು.

ಮಾರ್ಚ್‍ನಲ್ಲಿ ವಿಧಾನ ಮಂಡಲ ಅಧಿವೇಶನ ನಡೆದಿತ್ತು. ಇದೀಗ ಸೆ.12ರಿಂದ ಅಧಿವೇಶನ ಆರಂಭವಾಗುತ್ತಿದ್ದು, ‘ಮಳೆ-ಪ್ರವಾಹ, ಶೇ.40ರಷ್ಟು ಕಮಿಷನ್ ಆರೋಪ, ಪಠ್ಯ ಪುಸ್ತಕ ಪರಿಷ್ಕರಣೆ, ಸಾವರ್ಕರ್, ಟಿಪ್ಪು, ಕೋಮು ಸಂಘರ್ಷ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ' ಸೇರಿದಂತೆ ಹಲವು ವಿಚಾರಗಳು ಕಲಾಪದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.

ವಾರ್ತಾಭಾರತಿಯ ನ್ಯೂಸ್ ಅಪ್ಡೇಟ್ಸ್ ನಿಮ್ಮ ವಾಟ್ಸ್ ಆಪ್ ಗೆ  ತಲುಪಬೇಕೇ ? ಈ ಲಿಂಕ್ https://bit.ly/3Cd3adz ಕ್ಲಿಕ್ ಮಾಡಿ ನಮ್ಮ ಗ್ರೂಪ್ Join ಆಗಿ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News