ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Update: 2022-08-25 09:23 GMT

ಉಡುಪಿ, ಆ.25: ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಕೃಷ್ಣ ಮಠಕ್ಕೆ ಇಂದು  ಭೇಟಿ ನೀಡಿದರು.

ಶ್ರೀ ಕೃಷ್ಣನ ದರ್ಶನ ಪಡೆದ ಅವರು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥರಿಂದ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್, ಶಾಸಕ ಕೆ. ರಘುಪತಿ ಭಟ್ ಹಾಗು ಇತರರು ಜೊತೆಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News